ಚಿನ್ನ, ನೀನಿಲ್ಲದೆ ಬಿಮ್ಮೆನ್ನುತಿದೆ ರಮ್ಯೋದ್ಯಾನ

ಮತ್ತದೇ ಬೇಸರ, ಅದೇ ಸಂಜೆ, ಅದೇ ಏಕಾಂತ ನಿನ್ನ ಜೊತೆಯಿಲ್ಲ,ದೆ ಮಾತಿಲ್ಲದೆ ಮನ ವಿಭ್ರಾಂತ ಕಣ್ಣನೆ ದಣಿಸುವ ಈ ಪಡುವಣ ಬಾನ್ ಬಣ್ಣಗಳು, ಮಣ್ಣನೆ ಹೊನ್ನಿನ ಹಣ್ಣಾಗಿಸುವೀ ಕಿರಣಗಳು, ಹಚ್ಚನೆ ಹಸುರಿಗೆ ಹಸೆಯಿಡುತಿರುವೀ ಖಗ ಗಾನ ಚಿನ್ನ, ನೀನಿಲ್ಲದೆ ಬಿಮ್ಮೆನ್ನುತಿದೆ ರಮ್ಯೋದ್ಯಾನ ಆಸೆಗಳ ಹಿಂಡಿನ ತುಳಿತಕ್ಕೆ ಹೊಲ ನನ್ನೀದೇಹ ಬರುವೆಯೋ, ಬಾರೆಯೋ ನೀನೆನ್ನುತಿದೆ ಆ ಸಂದೇಹ ಮುತ್ತಿದಾಲಸ್ಯವ ಬಿಗಿ ಮೌನವ ಹೊಡೆದೋಡಿಸು ಬಾ ಮತ್ತೆ ಆ ಸಮತೆಯ ಹಿರಿ ಬೇಲಿಯ ಸರಿ ನಿಲ್ಲಿಸು ಬಾ ಬಣ್ಣ ಕಳೆದೊಡವೆಯ ತೆರ ಮಾಸುತಲಿದೆ ಸೂರ್ಯಾಸ್ತ ನೋಡಗೋ, ತಿಮಿರದ ಬಲೆ ಬೀಸಿದ ಇರುಳಿನ ಬೆಸ್ತ ವೆಚ್ಚವಾಗುತ್ತಿದೆ ಸವಿ ಚಣಗಳ ಧನ ದುಂದಾಗಿ; ನಲಿವಿನ ಗಳಿಕೆಗೆ ಬಳಸವುಗಳನೊಂದೊಂದಾಗಿ ...

ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ?

ನೀ ಹೀಂಗ ನೋಡಬ್ಯಾಡ ನನ್ನ ನೀ ಹೀಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ಸಂಸಾರ ಸಾಗರದಾಗ ಲೆಕ್ಕವಿರದಷ್ಟು ದುಃಖದ ಬಂಡಿ ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ ಎಲ್ಲಿ ಆಚೆಯಾ ದಂಡಿ ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ ನಾ ತಡೀಲಾರೆ ಅದು, ಯಾಕ ನೋಡತೀ ಮತ್ತ ಮತ್ತ ಇತ್ತ? ತಂಬಲs ಹಾಕದ ತುಂಬ ಕೆಂಪು ಗಿಡಗಡಕಹಣ್ಣಿನ ಹಾಂಗ ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ ಈ ಗದ್ದ, ಗಲ್ಲ, ಹಣಿ, ಕಣ್ಣುಕಂಡು ಮಾರೀಗೆ ಮಾರಿಯ ರೀತಿ ಸಾವನs ತನ್ನ ಕೈ ಸವರಿತಲ್ಲಿ, ಬಂತೆsನಗ ಇಲ್ಲದ ಭೀತಿ ...

ನೀ ಹೊರಟಿದ್ದೀಗ ಎಲ್ಲಿಗೆ?

ಘಮ ಘಮ ಘಮಾಡಿಸ್ತಾವ ಮಲ್ಲಿಗೆ ನೀ ಹೊರಟಿದ್ದೀಗ ಎಲ್ಲಿಗೆ? ತುಳುಕ್ಯಾಡುತ್ತಾವ ತೂಕಡಿಕಿ ಎವಿ ಅಪ್ಪುತ್ತಾವ ಕಣ್ ದುಡುಕಿ ಕನಸು ತೇಲಿ ಬರುತ್ತಾವ ಹುಡುಕಿ ನೀ ಹೊರಟಿದ್ದೀಗ ಎಲ್ಲಿಗೆ? ಚಿಕ್ಕಿ ತೋರಿಸ್ತಾವ ಚಾಚಿ ಬೆರಳ ಚಂದ್ರಮ ಕನ್ನಡಿ ಹರಳ ಮನ ಸೋತು ಆಯಿತು ಮರುಳ ನೀ ಹೊರಟಿದ್ದೀಗ ಎಲ್ಲಿಗೆ? ನೆರಳಲ್ಲಾಡುತ್ತಾವ ಮರದ ಬುಡಕ್ಕ ಕೇರಿ ತೇರಿ ನೂಗುತ್ತಾವ ದಡಕ್ಕ ಹಿಂಗ ಬಿಟ್ಟು ಇಲ್ಲಿ ನನ್ನ ನಡಕ ನೀ ಹೊರಟಿದ್ದೀಗ ಎಲ್ಲಿಗೆ? ನನ್ನ ನಿನ್ನ ಒಂದತನದಾಗ ಹಾಡು ಹುಟ್ಟಿ ಒಂದು ಮನದಾಗ ಬೆಳದಿಂಗಳಾತು ಬನದಾಗ ನೀ ಹೊರಟಿದ್ದೀಗ ಎಲ್ಲಿಗೆ? ಬಂತ್ಯಾಕ ನಿನಗ ಇಂದ ಮುನಿಸು ಬೀಳಲಿಲ್ಲ ನನಗ ಇದರ ಕನಸು ರಾಯ ತಿಳಿಯಲಿಲ್ಲ ನಿನ್ನ ಮನಸು ನೀ ಹೊರಟಿದ್ದೀಗ ಎಲ್ಲಿಗೆ? ...